ಕಾಗವಾಡ: ಕಾಗವಾಡದಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಕಬ್ಬಿನ ಬೆಳೆಗೆ ಬೆಂಕಿ ತಗಲಿ 47 ರೈತರ ₹ 1.96 ಕೋಟಿ ಮೌಲ್ಯದ ಕಬ್ಬಿನ ಬೆಳೆಗೆ ಹಾನಿಯಾಗಿದೆ ಎಂದು ಕಂದಾಯ ಇಲಾಖೆ ಪ್ರಾಥಮಿಕ ಸರ್ವೆ ಮಾಡಿ ವರದಿ ಸಲ್ಲಿಸಿದೆ.
107 ಏಕರೆ ಕ್ಷೇತ್ರದಲ್ಲಿ ಕಬ್ಬಿನ ಬೆಳೆ ಬೆಂಕಿಯಿಂದ ಸುಟ್ಟು ನಾಶವಾಗಿದೆ. ರೈತರಿಗೆ ಇನ್ನಷ್ಟು ಆರ್ಥಿಕ ಹಾನಿ ಆಗದಂತೆ ತಡೆಯಲು ಕೂಡಲೇ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಮಾಹಿತಿ ನೀಡಿ ಬೇಗನೆ ಕಬ್ಬು ಕಟಾವು ಆರಂಭಿಸಲಾಗಿದೆ. ಒಂದೆರಡು ದಿನಗಳಲ್ಲಿ ಎಲ್ಲ ಕಬ್ಬು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲಾಗುವುದು ಎಂದು ತಹಶಿಲ್ದಾರ್ ರಾಜೇಶ ಬುರ್ಲಿ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.