ADVERTISEMENT

ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ: 38 ವಿದ್ಯಾರ್ಥಿಗಳು ಅಸ್ತವ್ಯಸ್ಥ

​ಪ್ರಜಾವಾಣಿ ವಾರ್ತೆ
Published 27 ಜುಲೈ 2023, 18:20 IST
Last Updated 27 ಜುಲೈ 2023, 18:20 IST
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ರಾಯಣ್ಣ ಸೈನಿಕ ಶಾಲೆಗೆ ಗುರುವಾರ ರಾತ್ರಿ  ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು
ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ರಾಯಣ್ಣ ಸೈನಿಕ ಶಾಲೆಗೆ ಗುರುವಾರ ರಾತ್ರಿ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು   

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಅಸ್ವಸ್ಥ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಕ್ಕಳು ಚೇತರಿಸಿಕೊಂಡು ಮತ್ತೆ ಶಾಲೆಗೆ ತೆರಳಿದ್ದಾರೆ.

ಗುರುವಾರ ರಾತ್ರಿ ಪನೀರ್, ಚಿಕನ್ ಊಟ ನೀಡಲಾಗಿತ್ತು. ಊಟದ ನಂತರ ಮಕ್ಕಳು ಅಸ್ವಸ್ಥಗೊಂಡರು.

ADVERTISEMENT

ವಿಷಯ ತಿಳಿದು ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಪ್ರಭಾರಿ ತಹಶೀಲ್ದಾರ್ ಜೆ.ಸಿ. ಅಷ್ಠಗಿಮಠ, ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ, ಕಂದಾಯ ನಿರೀಕ್ಷಕ ಸುರೇಶ ಮಾಳಗಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಊಟದ ವ್ಯವಸ್ಥಾಪಕ ಮತ್ತು ಪ್ರಾಚಾರ್ಯರನ್ನು ತರಾಟೆಗೆ ತೆಗೆದುಕೊಂಡರು.

ಇನ್ನು ಮುಂದೆ ಗುಣಮಟ್ಟದ ಆಹಾರ ಪೂರೈಸುವಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.