ADVERTISEMENT

ಬೆಳಗಾವಿ: ಗಾಂಜಾ ಪ್ರಕರಣ, ಪೊಲೀಸರ ವಶದಲ್ಲಿದ್ದಾಗಲೇ ಆರೋಪಿ ಸಾವು

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 19:16 IST
Last Updated 11 ನವೆಂಬರ್ 2022, 19:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊಬ್ಬರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅನಾರೋಗ್ಯದಿಂದ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45) ಮೃತರು.

'ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು. ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು' ಎಂದು ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ) ರವೀಂದ್ರ ಗದಾಡಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.