ರಾಯಬಾಗ: ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಕುಡಚಿಯ ಮಧುರಾ ರೆಂದಾಳೆ (4) ಇತ್ತೀಚೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಡೆಂಗೆ ಜ್ವರದಿಂದ ಸಾವು ಸಂಭವಿಸಿರಬಹುದೆಂದು ಪೋಷಕರು ಶಂಕಿಸಿದ್ದಾರೆ.
ಕಳೆದ ವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಮಧುರಾ ಅವಳನ್ನು ಪೋಷಕರು, ಮಿರಜ್‌ದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಳು. ಅಂತ್ಯಕ್ರಿಯೆಗಾಗಿ ಸ್ವಗ್ರಾಮಕ್ಕೆ ಬಂದಾಗ, ವಿಷಯ ಬಹಿರಂಗವಾಗಿದೆ.
‘ಮಧುರಾ ಡೆಂಗೆ ಜ್ವರದಿಂದ ಸಾವು ಸಂಭವಿಸಿರಬಹುದೆಂದು ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ಇನ್ನೂ ದೃಢಪಟ್ಟಿಲ್ಲ. ಮಿರಜ್ ಆಸ್ಪತ್ರೆಯಿಂದ ದಾಖಲೆಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಅವುಗಳನ್ನು ಪರಿಶೀಲಿಸಿದ ನಂತರವೇ ಇದು ಖಾತರಿಯಾಗಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಬಾನೆ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.