ADVERTISEMENT

‘ಇಂಡಿಯಾಗೆ ಬಲ: ಸಂವಿಧಾನ ರಕ್ಷಣೆಯ ಭರವಸೆ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 15:03 IST
Last Updated 8 ಜೂನ್ 2024, 15:03 IST
ಕೌಜಲಗಿಯಲ್ಲಿ ಗುರುವಾರ ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಆತ್ಮಾವಲೋಕನ ಸಭೆ ಮತ್ತು ವಿಜಯೋತ್ಸವವನ್ನು ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿದರು
ಕೌಜಲಗಿಯಲ್ಲಿ ಗುರುವಾರ ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಆತ್ಮಾವಲೋಕನ ಸಭೆ ಮತ್ತು ವಿಜಯೋತ್ಸವವನ್ನು ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿದರು   

ಕೌಜಲಗಿ: ‘ಈ ಬಾರಿ ಜರುಗಿದ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದದ್ದು ಸಂವಿಧಾನದ ರಕ್ಷಣೆಯಾಗಿದೆ’ ಎಂದು ಮೂಡಲಗಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನಿಲ್ ಕುಮಾರ್ ದಳವಾಯಿ ಹೇಳಿದರು.

ಪಟ್ಟಣದ ದಳವಾಯಿ ತೋಟದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಜರುಗಿದ ಕಾಂಗ್ರೆಸ್ ಕಮಿಟಿ ಕಾರ್ಯಕರ್ತರ ಆತ್ಮಾವಲೋಕನ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದ ಪ್ರಯುಕ್ತ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ರಾಹುಲ್ ಗಾಂಧಿ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ಸಂವಿಧಾನದ ರಕ್ಷಣೆಗಾಗಿ ಎಲ್ಲರನ್ನು ಕಟ್ಟಿಕೊಂಡು ಭಾರತದಾದ್ಯಂತ ಪಾದಯಾತ್ರೆ, ಸಭೆ, ಸಮಾರಂಭ ಹಾಗೂ ಸತ್ಯಾಗ್ರಹಗಳನ್ನು ಆಯೋಜಿಸಿ ಜನರಲ್ಲಿ ಹೊಸ ಭರವಸೆ ಮೂಡಿಸಿದರು ಅದರ ಫಲವೇ ಇಂದು ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನ ಗಳಿಸಿ ಬಿಜೆಪಿಗೆ ಒಂದು ಎಚ್ಚರಿಕೆ ಗಂಟೆ ಬಾರಿಸಿ, ಸಂವಿಧಾನದ ರಕ್ಷಣೆಯ ಭರವಸೆ ನೀಡಿದೆ’ ಎಂದರು.

ADVERTISEMENT

‘ಕಾಂಗ್ರೆಸ್ ಕಾರ್ಯಕರ್ತರು ಅತಿ ಹುರುಪಿನಿಂದ ಚುನಾವಣೆ ಕಾರ್ಯದಲ್ಲಿ ತೊಡಗಿದ್ದು, ಅದರ ಫಲವೆಂಬಂತೆ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿಯವರು ಜಯಭೇರಿ ಬಾರಿಸಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ಸೋಲಿನ ಕುರಿತು ಆತ್ಮಾವಲೋಕನ ಮಾಡಬೇಕಿದೆ’ ಎಂದರು.

ಕಾಂಗ್ರೆಸ್ ಮುಖಂಡರ ವಿ.ಪಿ ನಾಯಕ್ ಮಾತನಾಡಿ, ‘ಕೆಲವರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು ಆದರೆ, ಐತಿಹಾಸಿಕ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಆಗುತ್ತದೆ’ ಎಂದರು.

ಕೌಜಲಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ ಅರಳಿ, ಅರಬಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಮಗದುಮ್, ಕಿಸಾನ್ ಘಟಕದ ಅಧ್ಯಕ್ಷ ವೆಂಕನಗೌಡ ಪಾಟೀಲ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮಾಮ ಹುನ್ನೂರ, ರೈತ ಮುಖಂಡ ಸುರೇಶ ನಾಯಕ, ಪುರಸಭೆ ಸದಸ್ಯರಾದ ರವಿ ಮೂಡಲಗಿ, ಲಕ್ಕಪ್ಪ ಶಾಬನ್ನವರ, ಚಂದ್ರು ನಾಯಿಂಗ್ಲಜ, ಬೀರಪ್ಪ ಬಳೋಲದಾರ, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಕೌಜಲಗಿಯಲ್ಲಿ ಗುರುವಾರ ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಕಾರ್ಯಕರ್ತರ ಆತ್ಮಾವಲೋಕನ ಸಭೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಅರಭಾವಿ ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ದಳವಾಯಿ ವಹಿಸಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.