ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ ಸಡಗರದಿಂದ ಹನುಮ ಜಯಂತಿ ಆಚರಿಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತ, ಕ್ಯಾಂಪ್ ಪ್ರದೇಶ, ರಾಮತೀರ್ಥ ನಗರದ ಕಣಬರ್ಗಿ ಕೆರೆ ರಸ್ತೆ ಮತ್ತಿತರ ಬಡಾವಣೆಗಳಲ್ಲಿ ಇರುವ ವಿವಿಧ ಹನುಮ ದೇವಸ್ಥಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದಿನವಿಡೀ ನೆರವೇರಿದವು.
ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ಬಂದ ಭಕ್ತರು, ಸರದಿಯಲ್ಲಿ ನಿಂತು ದರ್ಶನ ಪಡೆದರು. ಕಾಣಿಕೆ ಅರ್ಪಿಸಿ, ಹರಕೆ ತೀರಿಸಿದರು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.