ADVERTISEMENT

ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವ್ಯವಸ್ಥೆ: ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 15:49 IST
Last Updated 17 ಜೂನ್ 2024, 15:49 IST
ನಿಪ್ಪಾಣಿ ತಾಲ್ಲೂಕಿನ ಡೋಣೆವಡಿ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎರಡು ಕೊಠಡಿಗಳನ್ನು ಶಾಸಕಿ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು. ಬಿಇಒ ಮಹಾದೇವಿ ನಾಯಿಕ, ಮತ್ತಿತರರು ಇದ್ದಾರೆ
ನಿಪ್ಪಾಣಿ ತಾಲ್ಲೂಕಿನ ಡೋಣೆವಡಿ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎರಡು ಕೊಠಡಿಗಳನ್ನು ಶಾಸಕಿ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು. ಬಿಇಒ ಮಹಾದೇವಿ ನಾಯಿಕ, ಮತ್ತಿತರರು ಇದ್ದಾರೆ    

ನಿಪ್ಪಾಣಿ: ‘ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಉಜ್ವಲಗೊಳಿಸುವ ನಿಟ್ಟಿನಲ್ಲಿ ಅವಿರತವಾಗಿ ಪ್ರಯತ್ನಿಸಲಾಗುತ್ತಿದೆ’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ತಾಲ್ಲೂಕಿನ ಡೋಣೆವಾಡಿ ಗ್ರಾಮದಲ್ಲಿ ₹28 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ನೂತನ ಎರಡು ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ನಿತೇಶ ಖೋತ, ಎಸ್‍ಡಿಎಂಸಿ ಅಧ್ಯಕ್ಷ ಸಂದೀಪ ಸಂಕಪಾಳ, ಉಪಾಧ್ಯಕ್ಷ ದಯಾನಂದ ಪಾಟೀಲ, ತುಕಾರಾಮ ಮಾಳಿ, ಜನಾರ್ಧನ ಘಾಟಗೆ, ಸ್ನೇಹಾ ಘಾಟಗೆ, ಸುರೇಖಾ ಪಾಟೀಲ, ಸರೋಜಿನಿ ಕಾಂಬಳೆ, ಬಾಳಾಬಾಯಿ ಸೂರ್ಯವಂಶಿ, ಅರವಿಂದ ಪಾಟೀಲ, ರಾಜು ಭದರಗಡೆ, ಮೊದಲಾದವರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.