ಗೋಕಾಕ (ಬೆಳಗಾವಿ): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ ಅವರನ್ನು ‘ಕಾಯಕಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
‘ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ 2024ರ ಮಾರ್ಚ್ 1ರಿಂದ 4ರವರೆಗೆ 19ನೇ ಶರಣ ಸಂಸ್ಕೃತಿ ಉತ್ಸವ ಜರುಗುವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹1 ಲಕ್ಷ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.