ADVERTISEMENT

ಸಿ.ಎಂ ಸಿದ್ದರಾಮಯ್ಯ ರಾಜೀನಾಮೆಗೆ ಜಗದೀಶ ಮೆಟಗುಡ್ಡ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 16:17 IST
Last Updated 29 ಜುಲೈ 2024, 16:17 IST
ಬೈಲಹೊಂಗಲದಲ್ಲಿ ನಡೆದ ಬಿಜೆಪಿ ವಿಶೇಷ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು
ಬೈಲಹೊಂಗಲದಲ್ಲಿ ನಡೆದ ಬಿಜೆಪಿ ವಿಶೇಷ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು   

ಬೈಲಹೊಂಗಲ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸಚಿವರು, ಅಧಿಕಾರಿಗಳಿಂದ ಎಸ್.ಟಿ.ನಿಗಮ, ಮುಡಾ ಹಗರಣಗಳ ಮೂಲಕ ಸಾವಿರಾರು ಕೋಟಿ ರೂ. ಲಪಟಾಯಿಸಿದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಷ್ಟು ಬೇಗ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಗೌರವ ಉಳಿಸಬೇಕು’ ಎಂದು ಮಾಜಿ ಶಾಸಕ ಜಗದೀಶ ಮೆಟಗುಡ್ಡ ಆಗ್ರಹಿಸಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಬಿಜೆಪಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದ ಜನತೆಗೆ ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರ ಏರಿದ ಕಾಂಗ್ರೆಸ್ ಸರ್ಕಾರ ಆರಂಭದಿಂದಲ್ಲೂ ಒಂದಿಲ್ಲೊಂದು ಪ್ರಕರಣಗಳಲ್ಲಿ ಭ್ರಷ್ಟಾಚಾರ ಎಸಗುತ್ತ ಸಾಗಿದೆ. ಸರ್ಕಾರದ ಬೊಕ್ಕಸ ಖಾಲಿ ಆಗಿದ್ದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ಕಾರ್ಯಕರ್ತರ ಶಕ್ತಿಯಿಂದ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಗೆಲುವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ತನ್ನ ಶಕ್ತಿ ಪ್ರದರ್ಶಿಸಿದೆ’ ಎಂದರು.

ADVERTISEMENT

ಉದ್ಯಮಿ ವಿಜಯ ಮೆಟಗುಡ್ಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಗುರುಪಾದ ಕಳ್ಳಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್ ಎಸ್ ಸಿದ್ದನಗೌಡರ್, ಜಿಲ್ಲಾ ಸಹಕಾರ ಪೃಕೋಷ್ಠ ಸಂಚಾಲಕ ಸುನೀಲ ಮರಕುಂಬಿ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಮಂಡಲ ಉಪಾಧ್ಯಕ್ಷ ಸುಭಾಷ ತುರಮರಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಜಿಲ್ಲಾ ಒ.ಬಿ.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಡಪದ, ದಯಾನಂದ ಪರಾಳಶೆಟ್ಟರ, ನಾಮದೇವ ಸಿಂಗಣ್ಣವರ, ಶಂಕರ ಚೌಡಣ್ಣವರ, ಮಂಜುನಾಥ ಜೋರಾಪುರ್, ಸುರೇಶ್ ಮ್ಯಾಕಲ್, ಬಸವರಾಜ್ ಶಿಂತ್ರಿ, ಗೌಡಪ್ಪ ಹೊಸಮನಿ, ನಾಗಪ್ಪ ಸಂಗೊಳ್ಳಿ, ಬಸವರಾಜ್ ಪೂಜಾರ್, ಸಿ.ಜಿ.ವಿಭೂತಿಮಠ, ಶ್ರೀನಿವಾಸ ಭರಮಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.