ADVERTISEMENT

ಹುಕ್ಕೇರಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 13:17 IST
Last Updated 4 ಅಕ್ಟೋಬರ್ 2024, 13:17 IST
ಹುಕ್ಕೇರಿಗೆ ಶುಕ್ರವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು
ಹುಕ್ಕೇರಿಗೆ ಶುಕ್ರವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು   

ಹುಕ್ಕೇರಿ: ‘ಕನ್ನಡ ಜನರ ದಿನನಿತ್ಯದ ಭಾಷೆಯಾಗಬೇಕು. ಕರ್ನಾಟಕದಲ್ಲಿ ವಾಸಿಸುವವರು ಕನ್ನಡ ಪ್ರೀತಿಸಿ, ಬೆಳೆಸಬೇಕು. ಇದಕ್ಕೆ ರಾಜ್ಯ ಸರ್ಕಾರ ಪೂರಕ ವಾತಾವರಣ ಸೃಷ್ಟಿಸಬೇಕು’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ಅವಲಕ್ಕಿ ಹೇಳಿದರು.

ಮಂಡ್ಯದಲ್ಲಿ ಡಿ. 20ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ರಾಜ್ಯದಾದ್ಯಂತ ಸಂಚರಿಸುತ್ತಿರುವ ‘ಕನ್ನಡ ಜ್ಯೋತಿ ರಥ ಯಾತ್ರೆ’ ಶುಕ್ರವಾರ ಹುಕ್ಕೇರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್, ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ಸಿಪಿಐ ಮಹಾಂತೇಶ ಬಸ್ಸಾಪುರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ಕಸಾಪ ಮಾಜಿ ಅಧ್ಯಕ್ಷ ರಾಜಶೇಖರ್ ಇಚ್ಛಂಗಿ, ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಸಾರಾಪುರೆ ಪಾಲ್ಗೊಂಡಿದ್ದರು.

ADVERTISEMENT

ಇದಕ್ಕೂ ಮೊದಲು ಗೋಕಾಕದಿಂದ ಬಂದ ಕನ್ನಡ ಜ್ಯೋತಿ ಯಾತ್ರೆಯನ್ನು ಗಡಿಗ್ರಾಮ ಶಿರಢಾಣದಲ್ಲಿ ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ಮಲ್ಲಿಕಾರ್ಜುನ ಸಾರಾಪುರೆ ಸ್ವಾಗತಿಸಿದರು.

ಹುಕ್ಕೇರಿಗೆ ಶುಕ್ರವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಕೋರ್ಟ್ ಸರ್ಕಲ್ ಬಳಿ ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್ ಕಸಾಪ ಅಧ್ಯಕ್ಷ ಪ್ರಕಾಶ ಅವಲಕ್ಕಿ ಬಿಇಒ ಪ್ರಭಾವತಿ ಪಾಟೀಲ್ ಕನ್ನಡಾಂಬೆಗೆ ಪೂಜೆ ಮಾಡಿ ನಮನ ಸಲ್ಲಿಸಿದರು.
ಹುಕ್ಕೇರಿಗೆ ಶುಕ್ರವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಕೋರ್ಟ್ ಸರ್ಕಲ್ ಬಳಿ ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್ ಕಸಾಪ ಅಧ್ಯಕ್ಷ ಪ್ರಕಾಶ ಅವಲಕ್ಕಿ ಬಿಇಒ ಪ್ರಭಾವತಿ ಪಾಟೀಲ್ ಕನ್ನಡಾಂಬೆಗೆ ಪೂಜೆ ಮಾಡಿ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.