ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಲಂಚದ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್‌ಮೃತದೇಹವನ್ನು ಸ್ವಗ್ರಾಮ ಬಡಸದತ್ತ ತೆಗೆದುಕೊಂಡು ಹೋಗಲಾಗುತ್ತಿದೆ.
ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬದವರು, ಆರೋಪಿಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ಇವೆ. ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಯವರು ತನಿಖಾ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಸದ್ಯ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಗುತ್ತಿದೆ. ಗ್ರಾಮದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.