ADVERTISEMENT

ನಿಪ್ಪಾಣಿ: ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 14:30 IST
Last Updated 26 ಜುಲೈ 2024, 14:30 IST
<div class="paragraphs"><p>ನಿಪ್ಪಾಣಿ ತಾಲ್ಲೂಕಿನ ಕಾರದಗಾ ಗ್ರಾಮಕ್ಕೆ ತೆರಳಿ ಶಾಸಕಿ ಶಶಿಕಲಾ ಜೊಲ್ಲೆ ಸಂಭವನೀಯ ಪ್ರವಾಹದ ಕುರಿತು ಮಾಹಿತಿ ಪಡೆದರು </p></div>

ನಿಪ್ಪಾಣಿ ತಾಲ್ಲೂಕಿನ ಕಾರದಗಾ ಗ್ರಾಮಕ್ಕೆ ತೆರಳಿ ಶಾಸಕಿ ಶಶಿಕಲಾ ಜೊಲ್ಲೆ ಸಂಭವನೀಯ ಪ್ರವಾಹದ ಕುರಿತು ಮಾಹಿತಿ ಪಡೆದರು

   

ನಿಪ್ಪಾಣಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮಹಾರಾಷ್ಟ್ರದಿಂದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮತಕ್ಷೇತ್ರದ ಕಾರದಗಾ ಗ್ರಾಮಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ನದಿ ತೀರದ ಜನರ ಸಮಸ್ಯೆಗಳನ್ನು ಆಲಿಸಿದ ಅವರು, ಸಾರ್ವಜನಿಕರು ಭಯಪಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ. ಯಾವುದೇ ಪರಿಸ್ಥಿಯಲ್ಲಿ ಪ್ರವಾಹ ಎದುರಾದರೂ ಕಾಳಜಿ ಕೇಂದ್ರಗಳನ್ನು ತಯಾರಿಯಲ್ಲಿ ಇಡಬೇಕು. ಜಾನುವಾರುಗಳ ಮೇವಿನ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯುತ್ ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಬೇಕು’ ಎಂದು ತಾಲೂಕು ಅಧಿಕಾರಿಗಳಿಗೆ ಹೇಳಿದರು.

ADVERTISEMENT

ತಹಶೀಲ್ದಾರ್‌ ಮುಜಫ್ಫರ್ ಬಳಿಗಾರ, ನೋಡಲ್ ಅಧಿಕಾರಿ ಎ.ಎಸ್. ಪೂಜಾರಿ, ಪಿಡಿಒ ನಂದಕುಮಾರ್ ಪಪ್ಪೆ, ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್. ಸನದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.