ADVERTISEMENT

ಮರೆಣ್ಣವರಗೆ ‘ಕಾಯಕ ರತ್ನ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 15:52 IST
Last Updated 10 ಜುಲೈ 2024, 15:52 IST
ನಾಗರಾಜ
ನಾಗರಾಜ   

ಬೆಳಗಾವಿ: ಇಲ್ಲಿನ ವಡಗಾವಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಾಗರಾಜ ಮರೆಣ್ಣವರ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಲಭಿಸಿದೆ.

ಶೈಕ್ಷಣಿಕ, ಸಾಮಾಜಿಕ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಮಾಡಿದ ಸಾಧನೆ ಪರಿಗಣಿಸಿ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಜುಲೈ 13ರಂದು ಬೀದರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT