ಬೆಳಗಾವಿ: ಇಲ್ಲಿನ ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಎರಡು ಕಾಲೇಜುಗಳು ರಾಜ್ಯ ಸರ್ಕಾರದಿಂದ ಕೊಡಮಾಡುವ ಉತ್ತಮ ಎನ್‌ಎಸ್‌ಎಸ್ ಘಟಕಗಳ ಪ್ರಶಸ್ತಿಗೆ ಪಾತ್ರವಾಗಿವೆ.
ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜು (ಜೆಎನ್‌ಎಂಸಿ) 2017–18 ಹಾಗೂ ಕೆಎಲ್‌ಇ ಫಿಜಿಯೊಥೆರಫಿ ಕಾಲೇಜು 2018–19ನೇ ಸಾಲಿನ ಪ್ರಶಸ್ತಿಗೆ ಭಾಜನವಾಗಿವೆ. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಅಶ್ವಿನಿ ನರಸನ್ನವರ (ಜೆಎನ್‌ಎಂಸಿ) ಮತ್ತು ಡಾ.ಸ್ನೇಹಲ್ ಧರ್ಮಾವತ್ (ಫಿಜಿಯೊಥೆರಫಿ ಕಾಲೇಜು) ಪ್ರಶಸ್ತಿ ಸ್ವೀಕರಿಸಿದರು. ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.
ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ರಾಜ್ಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರತಾಪ ಲಿಂಗಯ್ಯ ಇದ್ದರು.
ಪ್ರಶಸ್ತಿಗೆ ಭಾಜನವಾದವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಕುಲಪತಿ ಪ್ರೊ.ವಿವೇಕ ಸಾವೊಜಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಜೆಎನ್‌ಎಂಸಿ ಪ್ರಾಂಶುಪಾಲೆ ಡಾ.ನಿರಂಜನಾ ಮಹಾಂತಶೆಟ್ಟಿ, ಕೆಐಪಿಟಿ ಪ್ರಾಂಶುಪಾಲ ಡಾ.ಸಂಜೀವ್‌ಕುಮಾರ್ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.