ಬೆಳಗಾವಿ: ‘ಬೆಳಗಾವಿ ಜಿಲ್ಲೆಯ ಸಚಿವರೊಬ್ಬರು ಭೂ ಕಬಳಿಕೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಶೇ 70ರಷ್ಟು ದಾಖಲೆ ಸಂಗ್ರಹಿಸಿದ್ದೇವೆ. ಇನ್ನಷ್ಟು ಮಾಹಿತಿ ಕಲೆಹಾಕಿ, ಮುಂದಿನ ದಿನಗಳಲ್ಲಿ ಈ ಪ್ರಕರಣ ಬಯಲಿಗೆ ಎಳೆಯುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.
‘ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಸಚಿವರೂ ಒಂದಿಲ್ಲೊಂದು ಅಕ್ರಮ ಎಸಗಿದ್ದಾರೆ. ಈಗ ಬೆಳಗಾವಿ ಜಿಲ್ಲೆಯ ಅಕ್ರಮಗಳನ್ನು ಬಯಲಿಗೆ ಎಳೆಯುವ ಸರದಿ ಬಂದಿದೆ’ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ಭೂ ಕಬಳಿಕೆ ಮಾಡಿದ ಸಚಿವರು ಯಾರೆಂಬ ಪ್ರಶ್ನೆಗೆ ಅವರು ಬಾಯಿ ಬಿಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.