ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.