ADVERTISEMENT

ನಿಪ್ಪಾಣಿ: ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2024, 15:45 IST
Last Updated 23 ಜನವರಿ 2024, 15:45 IST
ನಿಪ್ಪಾಣಿಯಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಪ್ರಸಾದ ಜೊಲ್ಲೆ ಚಾಲನೆ ನೀಡಿದರು
ನಿಪ್ಪಾಣಿಯಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಪ್ರಸಾದ ಜೊಲ್ಲೆ ಚಾಲನೆ ನೀಡಿದರು   

ನಿಪ್ಪಾಣಿ: ನಗರದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಕ್ರಮಕ್ಕೆ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಷನ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಂಗಳವಾರ ಚಾಲನೆ ನೀಡಿದರು.

ಉತ್ಸವದಲ್ಲಿ ಇಂಗ್ಲೆಂಡ್, ಸ್ವಿಜರ್‌ಲ್ಯಾಂಡ್, ಲಿಥುವೇನಿಯಾ ಸೇರಿದಂತೆ ಮುಂತಾದ ದೇಶಗಳ ಹೆಸರಾಂತ ಗಾಳಿಪಟ ಕ್ರೀಡಾಪಟುಗಳು ಹಾಗೂ ಕರ್ನಾಟಕ, ಪಂಜಾಬ್, ಗುಜರಾತ್, ರಾಜಸ್ಥಾನ, ಒರಿಸ್ಸಾ, ಮಹಾರಾಷ್ಟ್ರ, ಹರಿಯಾಣ, ದೆಹಲಿ ರಾಜ್ಯಗಳಿಂದಲೂ ಕ್ರೀಡಾಪಟುಗಳು ಆಗಮಿಸಿದ್ದಾರೆ.

ಸ್ಥಳೀಯ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ, ಉಪಾಧ್ಯಕ್ಷ ಪವನ ಪಾಟೀಲ, ನಿರ್ದೇಶಕ ರಾಜು ಗುಂದೇಶಾ, ಜಯವಂತ ಭಾಟಲೆ, ಪ್ರಣವ ಮಾನವಿ, ಸಂದೇಶ ಕಡ್ಡಿ ಉಪಸ್ಥಿತರಿದ್ದರು.

ADVERTISEMENT
ಆಕಾಶದಲ್ಲಿ ಹಾರಾಡುತ್ತಿರುವ ಬಗೆಬಗೆಯ ಗಾಳಿಪಟಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.