ADVERTISEMENT

ಚಿಕ್ಕೋಡಿ | ಲೋಕ ಅದಾಲತ್ ಡಿ.14ಕ್ಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 14:50 IST
Last Updated 21 ನವೆಂಬರ್ 2024, 14:50 IST
<div class="paragraphs"><p>ಲೋಕ ಅದಾಲತ್</p></div>

ಲೋಕ ಅದಾಲತ್

   

ಚಿಕ್ಕೋಡಿ: ಪಟ್ಟಣದಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್  ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬರುವ ಸಾಧ್ಯತೆ ಇದೆ  ಎಂದು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕಾವೇರಿ ಹೇಳಿದರು.

ಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು’ ಎಂದರು.

ADVERTISEMENT

ಚಿಕ್ಕೋಡಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ, ಹಿರಿಯ ನ್ಯಾಯಾಧೀಶ ಹರೀಶ ಪಾಟೀಲ ಮಾತನಾಡಿ, ‘ಲೋಕ ಅದಲಾತ್‌ನಲ್ಲಿ ತಜ್ಞ ವಕೀಲರು ಭಾಗಹಿಸುವರು, ಇದರಲ್ಲಿ ಮೇಲ್ಮನವಿ ಹೋಗಲು ಬರುವುದಿಲ್ಲ. ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಳ್ಳುವುದರಿಂದ ಸಾರ್ವಜನಿಕರ ಹಣ ಮತ್ತು ಸಮಯ ಉಳಿಯುತ್ತದೆ’ ಎಂದು ಹೇಳಿದರು.

ನ್ಯಾಯಾಧೀಶೆ ತೃಪ್ತಿ ಧರಣಿ, ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕಲ್ಮೇಶ ಕಿವಡ, ಉಪಾಧ್ಯಕ್ಷ ಸುಭಾಷ್ಯರನಾಳೆ, ವಕೀಲರ ಸಂಘದ ಮಹಿಳಾ ಪ್ರತಿನಿಧಿ ಅನ್ನಪೂರ್ಣ ಚೌಗಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.