ADVERTISEMENT

ಬಿಲ್ ಪಾವತಿಗೆ ಆಯುಕ್ತರ ಆದೇಶ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 15:55 IST
Last Updated 21 ಮಾರ್ಚ್ 2024, 15:55 IST

ಎಂ.ಕೆ.ಹುಬ್ಬಳ್ಳಿ: ‘ಇಲ್ಲಿನ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ ನುರಿಸಿದ ಕಬ್ಬಿನ ಸಂಪೂರ್ಣ ಬಿಲ್ ಅನ್ನು 15 ದಿನದೊಳಗೆ ಪಾವತಿಸದಿದ್ದರೆ, ಕಾರ್ಖಾನೆಗೆ ಸೇರಿದ ಚರ ಮತ್ತು ಸ್ಥಿರಾಸ್ಥಿಯನ್ನು ಜಪ್ತಿಮಾಡಿ, ರೈತರಿಗೆ ಹಣ ಪಾವತಿಸಬೇಕು’ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು, ಬೆಳಗಾವಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಒಟ್ಟು 2,11,723 ಮೆಟ್ರಿಕ್ ಟನ್ ಕಬ್ಬು ನುರಿಸಿರುವ  ಕಾರ್ಖಾನೆ, ಎಫ್‌ಆರ್‌ಪಿ ಪ್ರಕಾರ ಪ್ರತಿಟನ್‌ಗೆ ₹3,165 ದರದಂತೆ ಒಟ್ಟು ₹67.1 ಕೋಟಿ ಪಾವತಿಸಬೇಕಿದೆ. ಈ ಪೈಕಿ ₹3.5 ಕೋಟಿ ಪಾವತಿಸಿದ್ದು, ₹3.1  ಕೋಟಿ ಬಾಕಿ ಉಳಿಸಿಕೊಂಡಿದೆ. 

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಅಬಕಾರಿ ಇಲಾಖೆ ಉಪ ಆಯುಕ್ತರು, ಸಹಕಾರ ಸಂಘಗಳ ಉಪನಿಬಂಧಕರು, ಡಿವೈಎಸ್‌ಪಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಾನೂನು ಮಾಪನಾ ಶಾಸ್ತ್ರ ಇಲಾಖೆ ಅಧಿಕಾರಿ, ವಾಣಿಜ್ಯ ತೆರಿಗೆ ಅಧಿಕಾರಿ ಸೇರಿದಂತೆ ರೈತಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚೂನಪ್ಪಾ ಪೂಜೇರಿ ಹಾಗೂ ಸದಸ್ಯ ಸುಭಾಷ ಶಿರಬೂರ ಒಳಗೊಂಡ ಪರಿಶೀಲನಾ ತಂಡ ರಚಿಸಬೇಕು. ಬಿಲ್ ಮೊತ್ತ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.