ADVERTISEMENT

ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 16:13 IST
Last Updated 6 ಏಪ್ರಿಲ್ 2024, 16:13 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದಿಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ನಾನು ಹೋಗಬೇಕು. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸಮಯ ಹೊಂದಿಸಿಕೊಳ್ಳುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT