ADVERTISEMENT

ರಾಜ್ಯ ಸರ್ಕಾರ ಜನಸಾಮಾನ್ಯರ ರಕ್ತ ಹಿಂಡುತ್ತಿದೆ: ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 13:45 IST
Last Updated 22 ಜೂನ್ 2024, 13:45 IST
ನಿಪ‍್ಪಾಣಿಯ ಶಾಸಕಿ ಶಶಿಕಲಾ ಜೊಲ್ಲೆ ಅವರು ತಹಶೀಲ್ದಾರ್‌ ಮುಫ್ಫರ್ ಬಳಿಗಾರ ಅವರಿಗೆ ಮನವಿ ಸಲ್ಲಿಸಿದರು
ನಿಪ‍್ಪಾಣಿಯ ಶಾಸಕಿ ಶಶಿಕಲಾ ಜೊಲ್ಲೆ ಅವರು ತಹಶೀಲ್ದಾರ್‌ ಮುಫ್ಫರ್ ಬಳಿಗಾರ ಅವರಿಗೆ ಮನವಿ ಸಲ್ಲಿಸಿದರು   

ನಿಪ್ಪಾಣಿ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ರಕ್ತ ಹಿಂಡುತ್ತಿದೆ’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿ ಈಚೆಗೆ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು  ವರ್ಷ ಕಳೆದರೂ ಯಾವುದೇ ಶಾಸಕರಿಗೆ ಅನುದಾನ ಬಂದಿಲ್ಲ. ರಾಜ್ಯದ ಜನತೆ ಮೇಲೆ ಭಾರ ಹಾಕುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿದೆ’ ಎಂದು ಆರೋಪಿಸಿದರು.

‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆಗಳನ್ನು ಪುನರಾರಂಭಿಸಬೇಕು. ವಿದ್ಯುತ್ ದರ, ಸಿಇಟಿ ಪ್ರವೇಶ ಶುಲ್ಕ ಹೆಚ್ಚಿಸಿದ್ದು ಸರಿಯಲ್ಲ’ ಎಂದರು.

ADVERTISEMENT

ತಹಶೀಲ್ದಾರ್‌ ಮುಜಫ್ಫರ್ ಬಳಿಗಾರ ಅವರಿಗೆ ಮನವಿ ಸಲ್ಲಿಸಿದರು. ಸಿದ್ಧು ನರಾಟೆ, ಶ್ರೀಕಾಂತ ಬನ್ನೆ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡಾ ಪಾಟೀಲ, ಉಪಾಧ್ಯಕ್ಷ ಪವನ ಪಾಟೀಲ, ಸಂಚಾಲಕ ರಾಜೇಂದ್ರ ಗುಂದೇಶಾ, ಜಯವಂತ ಭಾಟಲೆ, ಬಾಳಾಸಾಹೇಬ ಕದಮ, ಸುನೀಲ ಪಾಟೀಲ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.