ಬೆಳಗಾವಿ: ‘ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ ನಿಲುವುಗಳಿಗೆ ಆದ್ಯತೆ ನೀಡಲಾಗುವುದು’ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಹೊಳಿ ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇದೇ ಮೊದಲ ಬಾರಿಗೆ ಪ್ರಗತಿಪರಿ ಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಅಭಿವೃದ್ಧಿ ಆಗುವುದು ಮುಖ್ಯ. ಎಲ್ಲ ಅಧಿಕಾರಿಗಳು, ಸಿಬ್ಬಂದಿ ಜನರ ಬೇಡಿಕೆಗಳಿಗೆ ಅನುಸಾರವಾಗಿ ಅಭಿವೃದ್ಧಿಗೆ ಒತ್ತು ಕೊಟ್ಟು ಕಾರ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯ್ತಿಗಳಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರ, ಜಲಜೀವನ ಮಿಷನ್ ಯೋಜನೆಯ ಅನುಷ್ಠಾನ, ಕೋವಿಡ್-19 ಸಾಂಕ್ರಾಮಿಕ ತಡೆಗಟ್ಟುವಿಕೆಯ ಕುರಿತು ಕೈಗೊಂಡ ಕ್ರಮಗಳು, ಗ್ರಾಮ ಪಂಚಾಯ್ತಿ ಹಳೆ ಕಟ್ಟಡ ಹಾಗೂ ಹೊಸ ಕಟ್ಟಡಗಳ ಸ್ಥಿತಿಗತಿ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು.
ತಾ.ಪಂ. ಇಒ ರಾಜೇಶ ಧನವಾಡಿ, ಉಪ ಕಾರ್ಯದರ್ಶಿ ಬಸವರಾಜ ಜಕನಾಯ್ಕ್, ಮುಖಂಡ ಶಂಕರಗೌಡ ಪಾಟೀಲ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.