ಬೆಳಗಾವಿ: ‘ಟೈಲರ್ ಕೆಲಸ ಮಾಡುವ ಕಾರ್ಮಿಕರಿಗೆ ₹5ಸಾವಿರ ಸಹಾಯಧನವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ನಂಬಿಕೊಂಡು ಸಾವಿರಾರು ಜನರು ಇಲ್ಲಿನ ಕಾರ್ಮಿಕ ಭವನಕ್ಕೆ ಗುಂಪು ಕಟ್ಟಿಕೊಂಡು ಬಂದು ಜಮಾಯಿಸುತ್ತಿದ್ದಾರೆ. ಸಹಾಯಧನ ನೀಡಲು ಕಾರ್ಮಿಕ ಇಲಾಖೆಯಿಂದ ಯಾವುದೇ ಅರ್ಜಿ ಅಹ್ವಾನಿಸಿಲ್ಲ’ ಎಂದು ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಸ್ಪಷ್ಟಪಡಿಸಿದ್ದಾರೆ.
‘ಅಸಂಘಟಿತ ವಲಯದ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಯಾವುದೆ ಸಹಾಯಧನ ಒದಗಿಸುವುದಿದ್ದಲ್ಲಿ ದಿನಪತ್ರಿಕೆಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ಕಾರ್ಮಿಕ ಇಲಾಖೆಯಿಂದ ಅಧಿಕೃತ ಮಾಹಿತಿ ಪಡೆಯದೇ ಸಾರ್ವಜನಿಕರು ಸುಳ್ಳು ಸುದ್ದಿ ನಂಬಿಕೊಂಡು ಬರಬಾರದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.