ADVERTISEMENT

ಅಂಗವಿಕಲರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ: ಮನಿಷಾಗೆ ವೈಯಕ್ತಿಕ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 8:30 IST
Last Updated 10 ಫೆಬ್ರುವರಿ 2021, 8:30 IST
ಮನಿಷಾ ಹೊಂಗಲ
ಮನಿಷಾ ಹೊಂಗಲ   

ಬೆಳಗಾವಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಂಗವಿಕಲರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ನೀಡಲಾಗುವ 2020ನೇ ಸಾಲಿನ ವೈಯಕ್ತಿಕ ಪ್ರಶಸ್ತಿಗೆ ಇಲ್ಲಿನ ಕಣಬರ್ಗಿ ಕಂದಾಯ ಕಾಲೊನಿಯ ಮನಿಷಾ ಮಹಾಂತೇಶ ಹೊಂಗಲ ಆಯ್ಕೆಯಾಗಿದ್ದಾರೆ.

ಮನಿಷಾ ಅವರು ಕ್ರೀಡಾ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ್ದಾರೆ. ಭಾರತೀಯ ಮಹಿಳಾ ವ್ಹೀಲ್‌ಚೇರ್ ಬಾಸ್ಕೆಟ್‌ಬಾಲ್ತಂಡದಲ್ಲಿ ಆಡಿದ್ದಾರೆ. ಫೆ. 11ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಇಲಾಖೆಯ ನಿರ್ದೇಶಕ ಡಾ.ವಿ. ಮುನಿರಾಜು ತಿಳಿಸಿದ್ದಾರೆ.

ADVERTISEMENT

ಜಿಲ್ಲೆಗೆ ಪ್ರಥಮ ಬಾರಿಗೆ ಈ ಪ್ರಶಸ್ತಿಗೆ ಭಾಜನವಾಗಿರುವ ಮನಿಷಾ ಅವರನ್ನು ಕಣಬರ್ಗಿ (ಆಟೊನಗರ) ಕೈಗಾರಿಕಾ ಪ್ರದೇಶ ಸಂಘದ ಅಧ್ಯಕ್ಷ ಸುರೇಶ ಯಾದವ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.