ಬೆಳಗಾವಿ: ‘ಬುಡಕಟ್ಟು ಜನಾಂಗದ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ, ಪ್ರಧಾನಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಜಿಲ್ಲೆಯ 51 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
‘ಪರಿಶಿಷ್ಟ ಪಂಗಡದವರು ಹೆಚ್ಚಾಗಿ ವಾಸಿಸುವ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಹುಕ್ಕೇರಿ ತಾಲ್ಲೂಕಿನಲ್ಲಿ 18, ಗೋಕಾಕದಲ್ಲಿ 12, ಬೆಳಗಾವಿಯಲ್ಲಿ 10, ಬೈಲಹೊಂಗಲದಲ್ಲಿ 6, ಸವದತ್ತಿಯಲ್ಲಿ 4, ಯರಗಟ್ಟಿ ಮತ್ತು ಖಾನಾಪುರದಲ್ಲಿ ತಲಾ 1 ಗ್ರಾಮ ಆಯ್ಕೆಯಾಗಿವೆ’ ಎಂದು ತಿಳಿಸಿದ್ದಾರೆ.
‘ಈ ಗ್ರಾಮಗಳಲ್ಲಿ ರಸ್ತೆ ಸುಧಾರಣೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದ್ದೀಕರಣ, ಆರೋಗ್ಯ, ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅನುಷ್ಠಾನ ಮತ್ತಿತರ ಸೌಕರ್ಯಗಳನ್ನು ವಿವಿಧ ಇಲಾಖೆಗಳು ಕಲ್ಪಿಸಲಿವೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.