ADVERTISEMENT

ಚಿಕ್ಕೋಡಿ | ಶೀಘ್ರ ಕನಕ ಭವನ ನಿರ್ಮಾಣ: ಪ್ರಕಾಶ ಹುಕ್ಕೇರಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 14:30 IST
Last Updated 18 ನವೆಂಬರ್ 2024, 14:30 IST
ಚಿಕ್ಕೋಡಿಯಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡ ಸಂತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು, ಕನಕದಾಸರ ಚಿತ್ರಕ್ಕೆ ಪುಷ್ಪಾರ್ಪಣೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಚಿಕ್ಕೋಡಿಯಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡ ಸಂತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು, ಕನಕದಾಸರ ಚಿತ್ರಕ್ಕೆ ಪುಷ್ಪಾರ್ಪಣೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಚಿಕ್ಕೋಡಿ: ಹಾಲುಮತ ಸಮಾಜದವರಿಗೆ ಅನುಕೂಲದ ದೃಷ್ಟಿಯಿಂದ ಚಿಕ್ಕೋಡಿ ಪಟ್ಟಣದಲ್ಲಿ ಹೈಟೆಕ್ ಕನಕ ಭವನ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶೀಘ್ರದಲ್ಲಿ ಕನಕ ಭವನ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.

ಪಟ್ಟಣದ ಐಎಂಎ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡ ಸಂತ ಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಟ್ಟಣದಲ್ಲಿ ಕನಕ ಭವನ, ವಾಲ್ಮೀಕಿ ಭವನ ನಿರ್ಮಾಣದ ಭರವಸೆ ನೀಡಿದಂತೆ ಇದೀಗ ತಲಾ ₹ 2.50 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು ಸಹ ಕನಕ ಭವನ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ADVERTISEMENT

ಉಪನ್ಯಾಸಕ ಎನ್.ಎಸ್.ಕುರಬರ ಮಾತನಾಡಿ, ಮಹಾನ್ ಸಂತ ಕನಕದಾಸರ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜ ಬಾಂದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದರು.

ತಹಶೀಲ್ದಾರ್‌ ಸಿ.ಎಸ್.ಕುಲಕರ್ಣಿ ಮಾತನಾಡಿ, ಕನಕ ಭವನ ನಿರ್ಮಾಣಕ್ಕೆ ಸಮಾಜ ಬಾಂದವರ ಜೊತೆ ಸಭೆ ನಡೆಸಿ ಸೂಕ್ತ ಜಾಗ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಕಾರ್ಯದರ್ಶಿ ಶಿವಾನಂದ ಮರ್ಯಾಯಿ, ಪರಸಭೆ ಉಪಾಧ್ಯಕ್ಷ ಇರ್ಪಾನ ಭೇಪಾರಿ, ಸದಸ್ಯರಾದ ರಾಮಾ ಮಾನೆ, ಗುಲಾಬ ಬಾಗವಾನ, ವರ್ಧಮಾನ ಸದಲಗೆ, ಜಿಪಂ ಮಾಜಿ ಸದಸ್ಯ ಸುರೇಶ ಚೌಗಲಾ, ವಿಜಯ ಮಾಂಜ್ರೇಕರ, ಸಿಪಿಐ ವಿಶ್ವನಾಥ ಚೌಗಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.