ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ‘ಪ್ರಯೋಗ ವಸಂತ–2022’ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಯೋಜನೆಗಳು ಮತ್ತು ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು.
ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಶೆಟ್ಟರ ಮಾತನಾಡಿ, ‘ವಿದ್ಯಾರ್ಥಿಗಳು ಈಗಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ತಾಂತ್ರಿಕ ವಿಷಯದಲ್ಲಿ ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು’ ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಡಾ.ಬಸವರಾಜ ಕಟಗೇರಿ, ಚಿಕ್ಕೋಡಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ ರಾಂಪುರೆ, ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೊ.ಉಮಾ ಪಾಟೀಲ ನಿರೂಪಿಸಿದರು. ಪ್ರೊ. ಎಸ್.ಬಿ. ಕುಲಕರ್ಣಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.