ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನೇಣು ಹಾಕಿಕೊಳ್ಳಲು ಯತ್ನಿಸಿದ್ದ ಕೈದಿಯೊಬ್ಬ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ‘ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಬಳ್ಳಾರಿ ಗಿರೀಶ ಮೃತಪಟ್ಟವ. ನಿತ್ರಾಣಗೊಂಡಿದ್ದ ಆತನನ್ನು ಕಂಡು ಸಹ ಕೈದಿಗಳು ಬಂದೀಖಾನೆ ಅಧಿಕಾರಿಗಳಿಗೆ ತಿಳಿಸಿದ್ದರು.
ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.