ಬೆಳಗಾವಿ: ‘ಪಂಚೇಂದ್ರಿಯಗಳಲ್ಲಿ ಒಂದಾಗಿರುವ ಕಿವಿ ಮಹತ್ವದ ಅಂಗವಾಗಿದೆ. ಅದರ ಸೋಂಕಿಗೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಅವಶ್ಯವಾಗಿದೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹುಸೇನಸಾಬ ಖಾಜಿ ಸಲಹೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ವಾರ್ತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು, ಹಾಗೂ ಬಿಮ್ಸ್ ಸಹಯೋಗದಲ್ಲಿ ವಿಶ್ವ ಶ್ರವಣ ದಿನದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿದ್ದು, ತಮ್ಮ ಕ್ಷೇತ್ರಗಳಲ್ಲಿ ಕಿವಿಯ ಸೋಂಕಿರುವರನ್ನು ಗುರುತಿಸಿ ಚಿಕಿತ್ಸೆಗೆ ಒಳಪಡಿಸಬೇಕು’ ಎಂದು ತಿಳಿಸಿದರು.
‘ತರಬೇತಿ ಹೊಂದಿರದ ವ್ಯಕ್ತಿಗಳು ಅಥವಾ ನಕಲಿ ವೈದ್ಯರಿಂದ ಕಿವಿ ಸ್ವಚ್ಛಗೊಳಿಸಿಕೊಳ್ಳಬಾರದು’ ಎಂದು ಹೇಳಿದರು.
ಡಾ.ವಿಜಯಾನಂದ ಹಳ್ಳಿ ಉಪನ್ಯಾಸ ನೀಡಿದರು.
ಡಾ.ಸತೀಶ ಬಾಗೇವಾಡಿ ಇದ್ದರು. ಸರ್ಕಾರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ವಿ. ಕಿವಡಸಣ್ಣವರ ಸ್ವಾಗತಿಸಿರು. ಹಿರಿಯ ಆರೋಗ್ಯ ಸಹಾಯಕ ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ಸೋಮಶೇಖರ ಮೂಲಿಮನಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.