ಬೆಳಗಾವಿ: ‘ಮುಖ್ಯಮಂತ್ರಿ ಬದಲಾವಣೆ ಹಾಗೂ ಇನ್ನಷ್ಟು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಮುಖಂಡರ ಮೇಲೆ ಹೈಕಮಾಂಡ್ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾವುದೇ ಹುದ್ದೆಗಳ ಬಗೆಗಿನ ಚರ್ಚೆ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕು. ಮಾಧ್ಯಮಗಳ ಮೂಲಕ ಜನರ ಮುಂದೆ ಹೋಗಬಾರದು. ಈ ಹುದ್ದೆಗಳನ್ನು ಸಾರ್ವಜನಿಕ ಸ್ಥಳದಲ್ಲೋ, ಮಾರುಕಟ್ಟೆಯಲ್ಲೋ ಸೃಷ್ಟಿಸಲು ಆಗುವುದಿಲ್ಲ’ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಆರೋಪ, ದೂರುಗಳಿಲ್ಲ. ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅನಗತ್ಯ ಚರ್ಚೆಗಳು ಬೇಡ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.