ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಕೋವಿಡ್–19 ಗುರುವಾರ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬುಧವಾರ ಪರೀಕ್ಷೆಗೆ ಒಳಗಾಗಿದ್ದೆ. ಗುರುವಾರ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಯಾವುದೇ ತೊಂದರೆಗಳಿಲ್ಲ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಬೇಕು‘ ಎಂದು ಕೋರಿದ್ದಾರೆ.
ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಅವರಿಗೂ ಕೋವಿಡ್ ದೃಢಪಟ್ಟಿದೆ. ಅವರಿಗೆ ಮೊದಲನೇ ಅಲೆ ಸಂದರ್ಭದಲ್ಲೂ ಸೋಂಕು ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.