ADVERTISEMENT

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 11:31 IST
Last Updated 28 ಮಾರ್ಚ್ 2021, 11:31 IST
ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಯಿತು
ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಯಿತು   

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಿಂದ ನಗರದತ್ತ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಾಹನಕ್ಕೆ ಮುತ್ತಿಗೆ ಹಾಕಲು ರಮೇಶ ಜಾರಕಿಹೊಳಿ ಬೆಂಬಲಿಗರು ಯತ್ನಿಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಕೆಲವರು ಚಪ್ಪಲಿಯನ್ನೂ ತೂರಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾನಿರತರನ್ನು ತಡೆದರು. ಕಾರಿನತ್ತ ನುಗ್ಗದಂತೆ ತಡೆದರು.

ಕಪ್ಪು ಬಾವುಟ ಹಿಡಿದು ನೂರಾರು ಮಂದಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.

ADVERTISEMENT

ಶಿವಕುಮಾರ್ ವಾಹನ‌ಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಡಿಕೆಶಿ ವಾಹನದ ಹಿಂದೆ ಹೋಗುತ್ತಿದ್ದ ವಾಹನಕ್ಕೆ ಕೆಲವರು ಕೈಯ್ಯಿಂದ ಬಡಿದರು. ಈ ವೇಳೆ ಸಫಾರಿ ಧರಿಸಿದ್ದ ಪೊಲೀಸರೊಬ್ಬರು ನಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಟ್ಟಾಡಿಸಿಕೊಂಡು ಹೋಗಿ ಥಳಿಸಿದರು. ಅವರನ್ನು ರಕ್ಷಿಸಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟರು. ಈ ವೇಳೆ ಓಡುತ್ತಿದ್ದ ಗುಂಪಿನಲ್ಲಿದ್ದ ಹಲವರು ಮುಗ್ಗರಿಸಿ ಬಿದ್ದ ಘಟನೆಯೂ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.