ADVERTISEMENT

ರಮೇಶ ಜಾರಕಿಹೊಳಿ ರಾಜೀನಾಮೆ ಆಗ್ರಹಿಸಿ ತವರಿನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 7:30 IST
Last Updated 3 ಮಾರ್ಚ್ 2021, 7:30 IST
ಗೋಕಾಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಗೋಕಾಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.   

ಬೆಳಗಾವಿ: ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಬಂದಿರುವುದರಿಂದ
ಜಲ ಸಂಪನ್ಮೂಲ ‌ಸಚಿವ ರಮೇಶ ಜಾರಕಿಹೊಳಿ ತಮ್ಮ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅವರ ತವರಾದ ಗೋಕಾಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವ ಸಚಿವರು ತಮ್ಮ ನಡವಳಿಕೆ ಸರಿ ಇಲ್ಲ ಎನ್ನುವುದನ್ನು ಈ ಪ್ರಕರಣದ ಮೂಲಕ ಸಾಬೀತುಪಡಿಸಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ತಮ್ಮ ಸಮಯ ನೀಡುವ ಬದಲಿಗೆ ವೈಯಕ್ತಿಕ ಆಸೆ -ಆಮಿಷಗಳನ್ನು ಈಡೇರಿಸಿಕೊಳ್ಳಲು ಆದ್ಯತೆ ಕೊಟ್ಟಿದ್ದಾರೆ. ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ಕೊಡಬೇಕು. ಇಲ್ಲವೇ ಮುಖ್ಯಮಂತ್ರಿಯೇ ರಾಜೀನಾಮೆ ಪಡೆಯಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು.

ಜೆಡಿಎಸ್ ಮುಖಂಡ ಭೀಮಪ್ಪ ಗಡಾದ, ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ... ಬಿಜೆಪಿ ಸಚಿವರ ನಡೆ ಹೇಸಿಗೆ ಮೂಡಿಸುತ್ತದೆ: ಬ್ರಿಜೇಶ್ ಕಾಳಪ್ಪ

ADVERTISEMENT

ರಮೇಶ ಜಾರಕಿಹೊಳಿ ರಾಜೀನಾಮೆಗೆ ಜೆಡಿಎಸ್ ಆಗ್ರಹ
ಹುಬ್ಬಳ್ಳಿ
: ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಎದುರಿಸುತ್ತಿರುವ ಜಲ ಸಂಪನ್ಮೂಲ ‌ಸಚಿವ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮಹಾನಗರ ಜೆಡಿಎಸ್ ಘಟಕದ ಪದಾಧಿಕಾರಿಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.