ADVERTISEMENT

ಹಠಾತ್ ಬೆಳವಣಿಗೆ: DCC ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದ ನಿರ್ದೇಶಕರು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 10:23 IST
Last Updated 4 ಅಕ್ಟೋಬರ್ 2024, 10:23 IST
   

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ‌.

41 ವರ್ಷಗಳಿಂದ ರಮೇಶ ಕತ್ತಿ‌ ನಿರ್ದೇಶಕರಾಗಿ, ಆರನೇ ಬಾರಿ ಅಧ್ಯಕ್ಷರಾಗಿದ್ದರು.

ADVERTISEMENT

ಬ್ಯಾಂಕಿಗೆ ಚಿಕ್ಕೋಡಿ, ನಿಪ್ಪಾಣಿ ಭಾಗದಲ್ಲಿ ಹೊಸ ಸದಸ್ಯರ ನೇಮಕ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲ 14 ನಿರ್ದೇಶಕರು‌ ಅಧ್ಯಕ್ಷ ಉಮೇಶ ಕತ್ತಿ ವಿರುದ್ಧ ನಿಂತಿದ್ದರು.

ನಿರ್ದೇಶಕ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಮೇಶ ಅವರ ಮಧ್ಯೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಗುರುವಾರ ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಇದು ಸ್ಫೋಟಗೊಂಡಿತು. ಅಧ್ಯಕ್ಷರನ್ನು ಹೊರಗಿಟ್ಟೇ ಎಲ್ಲ ನಿರ್ದೇಶಕರೂ ಪ್ರತ್ಯೇಕ ಸಭೆ ನಡೆಸಿದ್ದರು. ರಮೇಶ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ಮಧ್ಯೆಯೇ ರಮೇಶ ರಾಜೀನಾಮೆ‌ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.

'ಡಿಸಿಸಿ ಬ್ಯಾಂಕಿಗೂ ತಟ್ಟಿತೇ ರಾಜಕಾರಣದ 'ಒಳಪೆಟ್ಟು' ಎಂಬ ವಿಶೇಷ ವರದಿ 'ಪ್ರಜಾವಾಣಿ'ಯಲ್ಲಿ ಶುಕ್ರವಾರ ಪ್ರಕಟವಾಗಿತ್ತು.

ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣರಾದರು ಎಂಬ ಕಾರಣಕ್ಕೆ ಅಣ್ಣಾಸಾಹೇಬ ಜೊಲ್ಲೆ ಅವರು ರಮೇಶ ಮೇಲೆ ಮುನಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.