ಸವದತ್ತಿ: ತಾಲ್ಲೂಕಿನ ಮುರಗೋಡ ಪೋಲಿಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಏ.30ರಂದು ಪ್ರಕರಣ ದಾಖಲಾಗಿದೆ.
ಅಜಯ ಕೊಂಜಿ (22) ಅತ್ಯಾಚಾರ ಎಸಗಿದ ಆರೋಪಿ. ಇತನೊಂದಿಗೆ ಹನಮಂತ ಖಾನಾರ (24) ಸಹ ಈ ಕೃತ್ಯದಲ್ಲಿ ಭಾಗಿಯಾಗಿದ್ದನು ಎಂದು ಬಾಲಕಿ ಮುರಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಮುರಗೋಡ ಪಿಐ ಐ.ಎಂ.ಮಠಪತಿ ಅವರು, ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.