ADVERTISEMENT

ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 15:21 IST
Last Updated 3 ಅಕ್ಟೋಬರ್ 2024, 15:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ, 20 ವರ್ಷ ಕಠಿಣ ಶಿಕ್ಷೆ ಮತ್ತು ತಲಾ ₹10 ಸಾವಿರ ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಚಿಕ್ಕೋಡಿ ತಾಲ್ಲೂಕಿನ ಕುರ್ಲಿ ಗ್ರಾಮದ ನಿವಾಸಿ ಎಸ್‌.ಕೆ.ನೀಕಾಢೆ(24) ಶಿಕ್ಷೆಗೆ ಒಳಗಾದವ.

ADVERTISEMENT

ಮದುವೆಯಾಗಿ ನಂಬಿಸಿದ ಆತ, 2016ರ ಜು.14ರಂದು ಬಾಲಕಿಯನ್ನು ಕೊಲ್ಹಾಪುರಕ್ಕೆ ಅಪಹರಿಸಿಕೊಂಡು ಹೋಗಿದ್ದ. ಅಲ್ಲಿಂದ ಪುಣೆಗೆ ತೆರಳಿ, ನಂತರ ಕೊಲ್ಹಾಪುರ ಜಿಲ್ಲೆಯ ಕರವೀರ ತಾಲ್ಲೂಕಿನ ಆಡೂರ ಗ್ರಾಮಕ್ಕೆ ಕರೆತಂದಿದ್ದ. ಅಲ್ಲಿ ಬಾಡಿಗೆಗೆ ಮನೆ ಪಡೆದು, ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿ ತಂದೆ ನಿಪ್ಪಾಣಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಕಿಶೋರ ಭರಣಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ.‍ಪುಷ್ಪಲತಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಂತ್ರಸ್ತೆ ₹1 ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.