ADVERTISEMENT

ಸಮಾಜ ಕಾರ್ಯಕರ್ತರ ಪಾತ್ರ ಮಹತ್ವದ್ದು: ಬಸವರಾಜ ವರವಟ್ಟಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 13:42 IST
Last Updated 20 ಜನವರಿ 2021, 13:42 IST
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಸಮಾಜ ಕಾರ್ಯಕರ್ತರ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿದರು
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಸಮಾಜ ಕಾರ್ಯಕರ್ತರ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿದರು   

ಬೆಳಗಾವಿ: ‘ಸರ್ಕಾರದ ವಿವಿಧ ಯೋಜನೆಗಳ ಮೂಲಕ ಮಹಿಳಾ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧಿಸುವತ್ತ ಅಗತ್ಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಹೇಳಿದರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಸಮಾಜ ಕಾರ್ಯಕರ್ತರ ಸಂಘಟನೆಯ ಉದ್ಘಾಟನೆ ನೆರವೇರಿಸಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಸರ್ಕಾರಿ ಯೋಜನೆಗಳಲ್ಲಿ ಸಮಾಜ ಕಾರ್ಯಕರ್ತರ ಪಾತ್ರ’ ವಿಷಯದ ಕುರಿತು ಅವರು ಮಾತನಾಡಿದರು.

‘ಯೋಜನೆಗಳ ಅನುಷ್ಠಾನದಲ್ಲಿ ಸಮಾಜ ಕಾರ್ಯಕರ್ತರು ಪ್ರಾಮಾಣಿಕವಾಗಿ ತಮ್ಮ ಪಾತ್ರ ನಿಭಾಯಿಸಿದರೆ, ಸಮಾಜದ ಏಳಿಗೆಗೆ ಕೊಡುಗೆ ಕೊಟ್ಟಂತಾಗುತ್ತದೆ. ಸರ್ಕಾರಿ ನೌಕರಿ ಪಡೆದ ನಂತರ ಜನರ ಪರವಾಗಿ ನಿಂತು ಕಾರ್ಯ ಮಾಡುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

ಸಮಾಜ ವಿಜ್ಞಾನಗಳ ನಿಕಾಯದ ಅಧ್ಯಕ್ಷ ಪ್ರೊ.ಕೆ.ಎಲ್.ಎನ್. ಮೂರ್ತಿ ಮಾತನಾಡಿದರು.

ವಿಭಾಗದ ಮುಖ್ಯಸ್ಥ ಪ್ರೊ.ಅಶೋಕ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮ ನಿರೂಪಣಾ ಅಧಿಕಾರಿ ನವೀನ್‌ಕುಮಾರ್‌ ಮತ್ತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಾಮಮೂರ್ತಿ ಕೆ.ವಿ., ಸಮಾಜಕಾರ್ಯ ವಿದ್ಯಾರ್ಥಿ ಸಂಘಟನೆ ಸಂಯೋಜಕ ಡಾ.ಸಂತೋಷ ಪಾಟೀಲ, ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರಶೇಖರ ಬನಸೊಡೆ ಹಾಗೂ ದೇವತಾ ಡಿ. ಗಸ್ತಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಕಾಶ ಕಾಂಬಳೆ ಹಾಗೂ ರಾಧಿಕಾ ಬಾಲಗೋಳ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಾದ ಪ್ರವೀಣ ಪಾಟೀಲ ಮತ್ತು ಕಾವೇರಿ ಲಮಾಣಿ ನಿರೂಪಿಸಿದರು. ಕಿರಣ ಎಸ್. ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.