ADVERTISEMENT

ವಿಜಯೇಂದ್ರ ವಿರುದ್ಧ ಅಸಮಾಧಾನ; ಮೈಸೂರು ಪಾದಯಾತ್ರೆಗೆ ಗೈರಾದ BJP ನಾಯಕರಿಂದ ಸಭೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 7:09 IST
Last Updated 11 ಆಗಸ್ಟ್ 2024, 7:09 IST
<div class="paragraphs"><p>ಬಿ.ವೈ.ವಿಜಯೇಂದ್ರ, ಬಿಜೆಪಿ</p></div>

ಬಿ.ವೈ.ವಿಜಯೇಂದ್ರ, ಬಿಜೆಪಿ

   

ಕಿಣಯೇ (ಬೆಳಗಾವಿ): ಬಿಜೆಪಿ ನಾಯಕರು ನಡೆಸಿದ ಮೈಸೂರು ಪಾದಯಾತ್ರೆ ಮುಕ್ತಾಯವಾದ ಬೆನ್ನಲ್ಲೇ, ಪಾದಯಾತ್ರೆಯಿಂದ ದೂರ ಉಳಿದಿದ್ದ ನಾಯಕರು ಇಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.

ಬೆಳಗಾವಿಯಿಂದ‌ ಖಾನಾಪುರ ತಾಲ್ಲೂಕಿನ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮಾರ್ಗದ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಸಭೆ ಕುತೂಹಲ‌ ಮೂಡಿಸಿದೆ.

ADVERTISEMENT

ಶಾಸಕರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತಿತರ ನಾಯಕರು ಪಾಲ್ಗೊಂಡಿದ್ದಾರೆ. ಇನ್ನೂ ಹಲವರು ಬರುತ್ತಿದ್ದಾರೆ.

'ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡ ಬಿಜೆಪಿಯ ಈ ನಾಯಕರು ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸುತ್ತಿದ್ದಾರೆ' ಎಂದು ಮೂಲಗಳು ಖಚಿತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.