ADVERTISEMENT

ಬೆಳಗಾವಿ ಪಾಲಿಕೆ ಸೂಪರ್‌ಸೀಡ್‌ಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಧರಣಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 11:18 IST
Last Updated 30 ಸೆಪ್ಟೆಂಬರ್ 2024, 11:18 IST
<div class="paragraphs"><p>ಬೆಳಗಾವಿ ಪಾಲಿಕೆ ಸೂಪರ್‌ಸೀಡ್‌ಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು</p></div>

ಬೆಳಗಾವಿ ಪಾಲಿಕೆ ಸೂಪರ್‌ಸೀಡ್‌ಗೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು

   

ಪ್ರಜಾವಾಣಿ ಚಿತ್ರ

ಬೆಳಗಾವಿ: ಭ್ರಷ್ಟಾಚಾರದಲ್ಲಿ ಮುಳುಗಿದ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್‌ಸೀಡ್‌ ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ADVERTISEMENT

ಎಂಇಎಸ್‌, ಶ್ರೀರಾಮ ಸೇನೆ ಹಿಂದೂಸ್ಥಾನ್‌ ಸಂಘಟನೆಗಳ ನೇತೃತ್ವದಲ್ಲಿ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರು, ಸರ್ಕಾರಿ ಸರದಾರ್ಸ್‌ ಪ್ರೌಢಶಾಲೆ ಮೈದಾನದಿಂದ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು. ‘ಭ್ರಷ್ಟಾಚಾರ ನಿಲ್ಲಿಸಿ. ಪಾಲಿಕೆ ಉಳಿಸಿ’ ಎಂದು ಘೋಷಣೆ ಕೂಗಿದರು.

‘ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾದ ಶಾಸಕ ಅಭಯ ಪಾಟೀಲ ಹಾಗೂ ಇತರರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಡಳಿತಕ್ಕೆ ಮನವಿ ಕೂಡ ಸಲ್ಲಿಸಿದರು.

ಮುಖಂಡ ರಮಾಕಾಂತ ಕೊಂಡೂಸ್ಕರ್‌ ಮಾತನಾಡಿ, ‘ಪಾಲಿಕೆಯಲ್ಲಿ ಅಕ್ರಮವಾಗಿ ವಿವಿಧ ಕಾಮಗಾರಿ ನಡೆಯುತ್ತಿವೆ. ಜನಪ್ರತಿನಿಧಿಗಳ ಒತ್ತಡದಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ರಸ್ತೆ ನಿರ್ಮಿಸಿ, ಪಾಲಿಕೆ ಮೂಲಕ ಭೂಮಾಲೀಕರಿಗೆ ಹೆಚ್ಚಿನ ಪರಿಹಾರ ಕೊಡಿಸಲು ಯತ್ನಿಸಲಾಗುತ್ತಿದೆ. ಅಭಯ ಪಾಟೀಲ ಸೇರಿ ಹಲವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ’ ಎಂದು ಆರೋಪಿಸಿದರು.

‘ಎಸ್‌ಪಿಎಂ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯವರೆಗಿನ ಕಾಮಗಾರಿಯಲ್ಲಿ ಆಗಿರುವ ನಷ್ಟವನ್ನು ವಾಸ್ತವವಾಗಿ ತಪ್ಪು ಮಾಡಿದವರಿಂದಲೇ ಭರಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಳ್ಳುತ್ತಿರುವ ಕೆಲವು ಕಾಮಗಾರಿ ಅರ್ಧಕ್ಕೆ ನಿಂತಿವೆ. ಅವುಗಳನ್ನು ಪೂರ್ಣಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ನೇತಾಜಿ ಜಾಧವ, ಮಹಾದೇವ ಪಾಟೀಲ, ಅನಿಲ ಪಾಟೀಲ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.