ADVERTISEMENT

ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 10:53 IST
Last Updated 25 ಮಾರ್ಚ್ 2024, 10:53 IST
<div class="paragraphs"><p>ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಕೇಂದ್ರಕ್ಕೆ ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ಸೋಮವಾರ ಭೇಟಿ ನೀಡಿ, ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆ  ಪರಿಶೀಲಿಸಿದರು</p></div>

ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಕೇಂದ್ರಕ್ಕೆ ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ಸೋಮವಾರ ಭೇಟಿ ನೀಡಿ, ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆ ಪರಿಶೀಲಿಸಿದರು

   

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.

224 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 840 ವಿದ್ಯಾರ್ಥಿಗಳು ಗೈರು ಹಾಜರಾದರು.

ADVERTISEMENT

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 33,009 ವಿದ್ಯಾರ್ಥಿಗಳ ಪೈಕಿ 32,717 ವಿದ್ಯಾರ್ಥಿಗಳು ಹಾಜರಾದರು. 292 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 44,947 ವಿದ್ಯಾರ್ಥಿಗಳ ಪೈಕಿ 44,399 ವಿದ್ಯಾರ್ಥಿಗಳು ಹಾಜರಾದರು. 548 ವಿದ್ಯಾರ್ಥಿಗಳು ಗೈರು ಹಾಜರಾದರು.

‘ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಕೇಂದ್ರದಲ್ಲಿ ಅನಾರೋಗ್ಯದ ಕಾರಣಕ್ಕೆ, ವಿದ್ಯಾರ್ಥಿನಿಯೊಬ್ಬಳು ಮೂರ್ಛೆ ಹೋಗಿದ್ದಳು. ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಒದಗಿಸಿದ್ದರಿಂದ ಚೇತರಿಸಿಕೊಂಡು ಪರೀಕ್ಷೆ ಬರೆದಿದ್ದಾಳೆ. ಮಕ್ಕಳಿಗೆ ಎಲ್ಲಿಯೂ ತೊಂದರೆಯಾಗಿಲ್ಲ’ ಎಂದು ಡಿಡಿಪಿಐ ಮೋಹನಕುಮಾರ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಾರಿಗೆ ಸಂಸ್ಥೆಯು ‘ಹೋಳಿ’ ಹಬ್ಬದ ಆಚರಣೆ ಮಧ್ಯೆಯೂ, ಬಸ್‌ ವ್ಯವಸ್ಥೆ ಕಲ್ಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.