ಬೆಳಗಾವಿ: ಇಲ್ಲಿನ ಸಂಸದ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾಲೇ ಕೋವಿಡ್–19ನಿಂದ ನಿಧನರಾದ ದಿ.ಸುರೇಶ ಅಂಗಡಿ ಅವರ ಪುತ್ಥಳಿಯನ್ನು ನವದೆಹಲಿಯ ದ್ವಾರಕಾ ನಗರದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿರುವ ಸಮಾಧಿ ಸ್ಥಳದಲ್ಲಿ ಮಂಗಳವಾರ ಅನಾವರಣಗೊಳಿಸಲಾಯಿತು.
ಸಮಾಧಿಗೆ ಪೂಜೆ ಸಲ್ಲಿಸಿ, ಅಂಗಡಿ ಅವರ ಜೀವನ ಮತ್ತು ಸಾಧನೆಯನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು. ಅಂಗಡಿ ಕುಟುಂಬದವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಭಗವಂತ ಖೂಬಾ, ಸಂಸದರಾದ ಡಿ.ವಿ. ಸದಾನಂದ ಗೌಡ, ಪ್ರತಾಪ ಸಿಂಹ, ಬಿ.ವೈ. ರಾಘವೇಂದ್ರ, ಪಿ.ಸಿ. ಗದ್ದಿಗೌಡರ, ಎಸ್. ಮುನಿಸ್ವಾಮಿ, ಈರಣ್ಣ ಕಡಾಡಿ, ಅಣ್ಣಾಸಾಹೇಬ ಜೊಲ್ಲೆ, ಉಮೇಶ ಜಾಧವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಪಾಲ್ಗೊಂಡಿದ್ದರು.
‘ಜಗಜ್ಯೋತಿ ಬಸವೇಶ್ವರರ ಕಾಯಕ ತತ್ವದ ಅನುಯಾಯಿಯಾಗಿದ್ದ ಹಾಗೂ ಜನರ ಸಂಕಷ್ಟಗಳಿಗೆ ಸದಾ ಮಿಡಿಯುತ್ತಿದ್ದ ನಾಯಕರಾಗಿದ್ದ ಪತಿಯ ಸಮಾಧಿ ನಿರ್ಮಾಣಕ್ಕೆ ಕ್ರಮ ವಹಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅಂತರರಾಷ್ಟ್ರೀಯ ಬಸವ ಸಮಿತಿಯ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಸಂಸದೆ ಮಂಗಲಾ ಅಂಗಡಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.