ದೇವರಹಿಪ್ಪರಗಿ: ಡೋಣಿ ತೀರದ ಗ್ರಾಮಗಳಾದ ಯಾಳವಾರ, ಸಾತಿಹಾಳ, ಕೊಂಡಗೂಳಿ ಗ್ರಾಮಗಳ ಜಮೀನುಗಳಿಗೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಡೋಣಿ ತೀರದ ಗ್ರಾಮಗಳು ಡೋಣಿ ನದಿಯ ಪ್ರವಾಹಕ್ಕೆ ಒಳಗಾಗಿದ್ದು, ಗ್ರಾಮಗಳ ವ್ಯಾಪ್ತಿಯ ಜಮೀನುಗಳು ನೀರಿನಿಂದ ಆವೃತ್ತವಾಗಿವೆ. ಇದರಿಂದ ಜಮೀನುಗಳಲ್ಲಿನ ತೊಗರಿ ಸೇರಿದಂತೆ ಬಹುತೇಕ ಬೆಳೆಗಳು ಹಾಳಾಗಿವೆ ಎಂದು ಕೆಲವು ದಿನಗಳ ಹಿಂದೆ ಕೊಂಡಗೂಳಿ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಮಾಡಿದ ಕಾರಣ ತಹಶೀಲ್ದಾರ್ ಸಾತಿಹಾಳ ಗ್ರಾಮದ ಸೇತುವೆ ಹಾಗೂ ಡೋಣಿ ತೀರದ ಎಲ್ಲ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಬೆಳೆಗಳ ವಾಸ್ತವಿಕ ಸ್ಥಿತಿಗತಿಗಳನ್ನು ವೀಕ್ಷಿಸಿದರು. ನಂತರ ಗ್ರಾಮಸ್ಥರೊಂದಿಗೆ ಮಾತನಾಡಿ, ಮಳೆ ಹಾಗೂ ಡೋಣಿ ಪ್ರವಾಹದ ನೀರು ನಿಂತು ಹಾಳಾದ ಬೆಳೆಗಳ ಕುರಿತು ಸರ್ಕಾರಕ್ಕೆ ಸಮಗ್ರ ಮಾಹಿತಿ ನೀಡಲಾಗುವುದು ಎಂದರು.
ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ, ಗ್ರಾಮಾಡಳಿತ ಅಧಿಕಾರಿಗಳಾದ ಅನೀಲಕುಮಾರ ರಾಠೋಡ, ಪ್ರಕಾಶ ಬನ್ನಟ್ಟಿ, ಸಿದ್ದು ನಾಯ್ಕೋಡಿ, ಕೃಷಿ ಇಲಾಖೆಯ ಪಾಟೀಲ ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.