ಬೆಳಗಾವಿ: ಕೋವಿಡ್‌ನಿಂದ ನವದೆಹಲಿಯ ಏಮ್ಸ್ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದಸಂಸದ, ರೈಲ್ವೆ ಖಾತೆರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.
ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕು. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬದವರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಅಂಗಡಿ ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಯತ್ನ ಆರಂಭಿಸಿದ್ದರು.
ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.
ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ:ಕೋವಿಡ್: ಕೇಂದ್ರ ಸಚಿವ ಅಂಗಡಿ ನಿಧನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.