ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಶಾಸಕ ವಿಶ್ವಾಸ ವೈದ್ಯ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 14:24 IST
Last Updated 4 ಫೆಬ್ರುವರಿ 2024, 14:24 IST
ಶಾಸಕ ವಿಶ್ವಾಸ ವೈಧ್ಯ ಸಭೆ ಉದ್ದೇಶಿಸಿ ಮಾತನಾಡಿದರು.
ಶಾಸಕ ವಿಶ್ವಾಸ ವೈಧ್ಯ ಸಭೆ ಉದ್ದೇಶಿಸಿ ಮಾತನಾಡಿದರು.   

ಮುನವಳ್ಳಿ: ‘ಮೂಲ ಸೌಕರ್ಯ ಕಲ್ಪಿಸುವ ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿ ಪರಿಹಾರ ನೀದಿಯಿಂದ ₹ 3 ಕೋಟಿ ಹಣದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ಆರು ಹಾಸಿಗೆಯುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಯುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುತ್ತೇನೆ’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಪಟ್ಟಣದ ಸೋಮಶೇಖರಮಠದ ಲಿಂ. ಬಸವಲಿಂಗ ಶ್ರೀಗಳ 68ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಆರಂಭಗೊಂಡಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರವಚನಕಾರ ತಾರಿಹಾಳದ ಅಡವಿಸಿದ್ದೇಶ್ವರ ದೇವರು ಪ್ರವಚನ ನೀಡಿದರು.

ADVERTISEMENT

ಅತಿಥಿಗಳಾಗಿ ಸೋಮೇಶ್ವರ ಸಹಕಾರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ ಹಾಗೂ ಸಹಕಾರ ಧುರೀಣ ಉಮೇಶ ಬಾಳಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಸವದತ್ತಿಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಸೋಮಶೇಖರ ಮಠದ ಮುರುಘೇಂದ್ರ ಶ್ರೀ ಅಧ್ಯಕ್ಷತೆ ವಹಿಸಿದ್ದರು. ಸವದತ್ತಿಯ ಬೆಟಸೂರಮಠದ ಅಜ್ಜಯ್ಯ ಶ್ರೀ, ಸಂಗನಬಸವದೇವರು, ಪುರಸಭೆ ಸದಸ್ಯ ಸಿ.ಬಿ. ಬಾಳಿ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಡಿ. ಟೋಪೋಜಿ, ತೆಗ್ಗಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತ ಸಿಂಗಣ್ಣವರ ಅವರ ಗುರುರಕ್ಷೆ ನಡೆಯಿತು.

ಬಿ.ಬಿ. ಹೂಲಿಗೊಪ್ಪ ಸ್ವಾಗತಿಸಿದರು, ಗಂಗಾದರ ಗೊರಾಬಾಳ ಕಾರ್ಯಕ್ರಮ ನಿರೂಪಿಸಿದರು. ದೇವರಾಜ ಯರಕಿಹಾಳ, ಹನುಮಂತ ಅಂಕದ ಅವರಿಂದ ಸಂಗೀತ ಸೇವೆ ನಡೆಯಿತು.

ಎಲ್ಲ ಶ್ರೀಗಳು ಸೇರಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.