ADVERTISEMENT

ಕಾಗವಾಡ: ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 15:15 IST
Last Updated 13 ಜೂನ್ 2024, 15:15 IST
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರೂಪಾಬಾಯಿ ರೂಪನವರ ಚಿತ್ರ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರೂಪಾಬಾಯಿ ರೂಪನವರ ಚಿತ್ರ.   

ಕಾಗವಾಡ: ತಾಲ್ಲೂಕಿನ ಮೋಳೆ ಗ್ರಾಮದ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರೂಪಾಬಾಯಿ ಪತಿ ಯೋಧನಾಗಿದ್ದು ಮನೆಯಲ್ಲಿ ಪ್ರತಿದಿನವು ಅತ್ತೆ ಮಾವ ಕಿರುಕುಳ ನೀಡುತ್ತಿದ್ದರು ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ, ಕಾಗವಾಡ ಠಾಣೆ ಪಿಎಸ್ಐ ಎಂ.ಬಿ. ಬಿರಾದರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT