ಉಗರಗೋಳ(ಬೆಳಗಾವಿ ಜಿಲ್ಲೆ): ಮಣ್ಣೆತ್ತಿನ ಅಮವಾಸ್ಯೆ ಹಾಗೂ ‘ಶಕ್ತಿ’ ಯೋಜನೆ ಹಿನ್ನೆಲೆಯಲ್ಲಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಭಾನುವಾರ ಭಕ್ತಸಾಗರವೇ ಹರಿದುಬಂದಿತ್ತು. ಮಹಿಳೆಯರ ಸಂಖ್ಯೆ ಹೆಚ್ಚಿತ್ತು.
ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯಲ್ಲಮ್ಮನ ಸನ್ನಿಧಿಗೆ ಬಂದಿಳಿದರು. ಯಲ್ಲಮ್ಮನಗುಡ್ಡ ಮಾರ್ಗವಾಗಿ ಸಂಚರಿಸುವ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕಿದವು.
‘ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕೊಟ್ಟಿದ್ದಕ್ಕೆ ಯಲ್ಲಮ್ಮನಗುಡ್ಡಕ್ಕೆ ಬಂದಿದ್ದೇವೆ. ಶಕ್ತಿದೇವತೆ ದರ್ಶನ ಪಡೆಯಲು ಶಕ್ತಿ ಯೋಜನೆ ನೆರವಾಗಿದೆ’ ಎಂದು ಕಲಬುರಗಿಯ ಜೋಗತಿ ದೇವಮ್ಮ ಹೇಳಿದರು.
ಬೆಳಗಾವಿ ತಾಲ್ಲೂಕಿನ ಸುಳೇಭಾವಿಯ ಮಹಾಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದರು. ಬೈಲಹೊಂಗಲದಿಂದ ಧರ್ಮಸ್ಥಳ, ಉಳವಿ, ಸೊಗಲ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಪ್ರಯಾಣಿಕರು ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.