ಬೆಳಗಾವಿ: ಕೆಎಲ್‌ಇ ಸ್ವಾಯತ್ತ ವಿಶ್ವವಿದ್ಯಾಲಯವು, ಕರ್ನಾಟಕ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಪ್ರಾದೇಶಿಕ ನಿರ್ದೇಶನಾಲಯ ಸಹಯೋಗದಲ್ಲಿ ಮಂಗಳವಾರ, ಇಲ್ಲಿನ ಜೆ.ಎನ್. ಮೆಡಿಕಲ್ ಕಾಲೇಜು ಆವರಣದಲ್ಲಿ ‘ರಾಷ್ಟ್ರೀಯ ಏಕೀಕರಣ ಶಿಬಿರ’ ನಡೆಯಿತು.
ಶಿಬಿರ ಉದ್ಘಾಟಿಸಿದ ಸಂಸದೆ ಮಂಗಲಾ ಅಂಗಡಿ, ‘ಏಕೀಕರಣದ ಮೂಲಕ ಸುಸ್ಥಿರ ಅಭಿವೃದ್ದಿಯ ಕಡೆಗೆ ಸಣ್ಣ ಬದಲಾವಣೆಗಳು’ ಎಂಬ ವಿಷಯ ಕುರಿತು ಶಿಬಿರ ಆಯೋಜಿಸಿದ್ದು ಸಂತಸ ತಂದಿದೆ. ಏಳು ದಿನಗಳ ಕಾಲ ಜರುಗಲಿರುವ ಈ ಶಿಬಿರದಲ್ಲಿ ಆರು ರಾಜ್ಯಗಳಿಂದ ಒಟ್ಟು 150 ಎನ್‌ಎಸ್‌ಎಸ್ ಸ್ವಯಂ ಸೇವಕರು ಪಾಲ್ಗೊಂಡಿದ್ದು ಖುಷಿ ವಿಷಯ’ ಎಂದರು.
ಅಧ್ಯಕ್ಷೀಯ ಭಾಷಣ ಮಾಡಿದ ಕೆಎಲ್‌ಇ ವಿಶ್ವವಿದ್ಯಾಲಯದ ಕುಲಪತಿ ಡಾ.ನಿತಿನ್ ಗಂಗನೆ, ‘ವಿದ್ಯಾರ್ಥಿಗಳು ಸುಸ್ಥಿರ ಅಭಿವೃದ್ದಿ ಬಗ್ಗೆ ಕಲಿತು ತಮ್ಮ ಸಂಸ್ಥೆಗಳಲ್ಲಿ ಮತ್ತು ಪ್ರದೇಶಗಲ್ಲಿ ಅಳವಡಿಸಬೇಕು’ ಎಂದರು.
ಜೆಎನ್‌ಎಂಸಿ ಪ್ರಾಂಶುಪಾಲರಾದ ಡಾ.ಎನ್.ಎಸ್.ಮಹಾಂತಶೆಟ್ಟಿ ಮಾತನಾಡಿ, ‘ನನಗಲ್ಲ ನಿನಗೆ’ ಎನ್ನವುದು ಎನ್‌ಎಸ್‌ಎಸ್ ಧ್ಯೇಯ ವಾಕ್ಯ. ಇದನ್ನು ಅರಿತುಕೊಂಡು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು’ ಎಂದರು.
ಕುಲಸಚಿವ ಡಾ.ವಿ.ಎ.ಕೋಠಿವಾಲೆ ಸ್ವಾಗತಿಸಿದರು. ಡಾ.ಅಶ್ವಿನಿ ನರಸನ್ನವರ ಅತಿಥಿಗಳನ್ನು ಪರಿಚಯಿಸಿದರು. ಕೆ.ಎಲ್.ಇ. ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ನಮ್ರತಾ ದೇವುಲಕರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.