ಬೆಂಗಳೂರು: ನಮ್ಮ ಮೆಟ್ರೊದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕನ್ನಡಿಗರು ನಡೆಸಿದ ಹೋರಾಟದ ಫಲವಾಗಿ ಮೆಟ್ರೊದಲ್ಲಿನ ಹಿಂದಿ ಫಲಕಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಕೊನೆಗೂ ಕನ್ನಡಿಗರ ಹೋರಾಟಕ್ಕೆ ಮಣಿದ ನಮ್ಮ ಮೆಟ್ರೊ ಹಿಂದಿ ಫಲಕಗಳನ್ನು ತೆರವುಗೊಳಿಸಲು ಮುಂದಾಗಿದೆ.
[related]
ನಗರದ ಕೆಲವು ನಿಲ್ದಾಣಗಳಲ್ಲಿ ಇರುವ ಹಿಂದಿ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ನಿಲ್ದಾಣದ ಮುಖ್ಯ ದ್ವಾರದಲ್ಲಿನ ನಾಮಫಲಕಗಳನ್ನು ತೆರವುಗೊಳಿಸಿ ಹೊಸದಾಗಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುವ ನಾಮಫಲಕಗಳನ್ನು ಬರೆಸಲಾಗುತ್ತಿದೆ.
ಮೆಟ್ರೊದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು. ನೆಟ್ಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಂದಿ ಹೇರಿಕೆಯನ್ನು ರಾಜ್ಯ ಸರ್ಕಾರ ಕೂಡ ಖಂಡಿಸಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು.
[related]
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.