ADVERTISEMENT

ಕಲಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2017, 20:04 IST
Last Updated 29 ಏಪ್ರಿಲ್ 2017, 20:04 IST

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ 46ನೇ ಕಲಾ ಪ್ರದರ್ಶನ ಹಾಗೂ ಸುವರ್ಣ ಸಂಭ್ರಮ–ಕಲಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ.

ರಾಜ್ಯದ ನಿವಾಸಿಗಳಾಗಿರುವ, 5 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ ಕಲಾವಿದರು ಕಲಾ ಪ್ರದರ್ಶನದಲ್ಲಿ ಭಾಗವಹಿಸಬಹುದು. ಪ್ರದರ್ಶನದಲ್ಲಿ ಆಯ್ಕೆಯಾಗುವ 10 ಕಲಾಕೃತಿಗಳಿಗೆ ತಲಾ₹25,000  ಮತ್ತು ಸುವರ್ಣ–ಸಂಭ್ರಮ–ಕಲಾ ಪುರಸ್ಕಾರಕ್ಕೆ ಆಯ್ಕೆಯಾಗುವ 10 ಕಲಾವಿದರಿಗೆ ₹ 20,000  ಬಹುಮಾನ ನೀಡಲಾಗುತ್ತದೆ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನಾಂಕ. ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 2 ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ.
ಸಂಪರ್ಕ: 080–22480297

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.