ಬೆಂಗಳೂರು: ‘ಕವಿ ಬಿ.ಆರ್.ಲಕ್ಷ್ಮಣರಾವ್ ಅವರಿಗೆ 70 ವರ್ಷ ತುಂಬಿದ ಸಲುವಾಗಿ ಅಕ್ಟೋಬರ್ 1ರಂದು ಜಯನಗರದ ಎಚ್.ಎನ್. ಕಲಾಕ್ಷೇತ್ರದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ವೆಂಕಟೇಶಮೂರ್ತಿ ಶಿರೂರ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಕ್ಷ್ಮಣರಾವ್ ಅವರ 12 ಗೀತೆಗಳನ್ನು ಪ್ರಸಿದ್ಧ ಕಲಾವಿದರಿಂದ ಪ್ರಸ್ತುತ ಪಡಿಸಲಾಗುತ್ತದೆ. ಅವರ ಕವಿತೆಗಳನ್ನು ಡಾ. ತಿಪ್ಪೇಸ್ವಾಮಿ ಅವರು ಹಿಂದಿ ಭಾಷೆಗೆ ಅನುವಾದಿಸಿದ್ದು, ಈ ಕೃತಿಯನ್ನೂ ಬಿಡುಗಡೆ ಮಾಡಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.